Skip to content
March 16, 2026
  • Wondershare Filmora 14.9.3.14445
  • Wondershare Filmora 15.1.2.17051
  • Adobe Premiere Pro 2025 25.6.4
  • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೆರವಿನ ಹಸ್ತ

Newsletter
Random News
  • HOME
  • Softwares
  • ಕ್ರೀಡೆ
  • ಭವಿಷ್ಯ
  • ಮನರಂಜನೆ
  • ರಾಜಕೀಯ
  • ರಾಜ್ಯ
Headlines
  • Wondershare Filmora 14.9.3.14445

    2 months ago2 months ago
  • Wondershare Filmora 15.1.2.17051

    2 months ago2 months ago
  • Adobe Premiere Pro 2025 25.6.4

    2 months ago2 months ago
  • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೆರವಿನ ಹಸ್ತ

    2 months ago2 months ago
  • ಲಿಂಗಸುಗೂರು ಜ 8 : ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಲ್ಲಿ ಅಬಕಾರಿ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ, ಲಿಂಗಸುಗೂರು ಅಬಕಾರಿ ವಲಯದ ಸರ್ಕಲ್ ಇನ್ಸ್ಪೆಕ್ಟರ್ ಲಕ್ಷ್ಮೀದೇವಿ ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಲಿಂಗಸಗೂರು ಸಹಾಯಕ ಆಯುಕ್ತರು ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಇದರಿಂದ ಸಾರ್ವಜನಿಕ ಶಾಂತಿ ಕದಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ನೀಡಿದವರ ಮಾಹಿತಿಯನ್ನು ಬಹಿರಂಗಪಡಿಸಿ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯನ್ನು ಅಮಾನತು ಮಾಡಿ ತನಿಖೆ ನಡೆಸಬೇಕು ಹಾಗೂ ದೂರುದಾರರಿಗೆ ರಕ್ಷಣೆ ಒದಗಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ. ಮನವಿಗೆ ಸ್ಪಂದಿಸದಿದ್ದರೆ ಅಬಕಾರಿ ಇಲಾಖೆಯ ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಅಕ್ರಮ ಮದ್ಯ ಮಾರಾಟ ಆರೋಪಅಬಕಾರಿ ಅಧಿಕಾರಿಯ ಅಮಾನತುಗೆ ಒತ್ತಾಯ.

    2 months ago3 weeks ago
  • ಬೆಂಗಳೂರು, ಜನವರಿ 8: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ,"ವಿಬಿಜಿ, ರಾಮ್ ಜಿ" ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು. ಅವರು ಇಂದು ಸಚಿವ ಸಂಪುಟ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಜನರ ನ್ಯಾಯಾಲಯಕ್ಕೂ ವಿಬಿಜಿ, ರಾಮ್ ಜಿ" ಯೋಜನೆಯ ತೆಗೆದುಕೊಂಡು ಹೋಗಲು ನಿರ್ಣಯಿಸಲಾಗಿದೆ ಎಂದ ಅವರು ಸಂವಿಧಾನದ 73 ನೇ ತಿದ್ದುಪಡಿಯಾದ ನಂತರ ದೇಶದಲ್ಲಿ ವಿಕೇಂದ್ರೀಕರಣವಾಗಿದೆ. ಈ ಯೋಜನೆಯಿಂದ ವಿಕೇಂದ್ರೀಕರಣಕ್ಕೆ ಕೊಡಲಿ ಏಟು ಬಿದ್ದಿದೆ. ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕನ್ನು ಕಿತ್ತುಕೊಳ್ಳುವ ಕೆಲಸವನ್ನು MNREGA ವಾಪಸ್ಸು ಪಡೆಯುವ ಮೂಲಕ ಮಾಡಲಾಗಿದೆ ಎಂದರು. MNREGA ಮೂಲಕ ಪಂಚಾಯಿತಿಗಳಲ್ಲಿ ಆಸ್ತಿ ನಿರ್ಮಾಣವಾಗುತ್ತಿತ್ತು. ಈಗ ಕರಾಳ ಕಾನೂನು ತಂದು ಕಾರ್ಮಿಕರು ಗುತ್ತಿಗೆದಾರರು ಮಾಡಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಕೆಲಸ ಮಾಡಬೇಕಿದೆ. ಕೂಲಿಕಾರರ ಹಿತ ಕಾಪಾಡುವ ಆಸಕ್ತಿಯನ್ನು ಕೇಂದ್ರ ಸರ್ಕಾರ ತೋರಿಸಿಲ್ಲ . ಬದಲಿಗೆ ಉದ್ಯೋಗದ ಹಕ್ಕನ್ನು ಕಿತ್ತುಕೊಂಡಿದೆ. ಗ್ರಾಮಗಳಲ್ಲಿ ಯಾವ ಕೆಲಸವಾಗಬೇಕೆಂದು ತೀರ್ಮಾನಿಸುವ ಅಧಿಕಾರ ಪಂಚಾಯಿತಿಗಳಿಗಿತ್ತು. ಈಗ ಅದನ್ನು ಸಂಪೂರ್ಣವಾಗಿ ಕಿತ್ತುಕೊಂಡು ಕೆಲಸ ಎಲ್ಲಿ ಆಗಬೇಕು ಎಂದು ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಈ ಕರಾಳ ಶಾಸನವನ್ನು ಕರ್ನಾಟಕ ಸರ್ಕಾರ ತೀವ್ರವಾಗಿ ವಿರೋಧಿಸುತ್ತದೆ. ರಾಜಕೀಯವಾಗಿ, ಕಾನೂನಾತ್ಮಕವಾಗಿ ಹಾಗೂ ಜನರ ನ್ಯಾಯಾಲಯದಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದರು. ಮೇಲ್ನೋಟಕ್ಕೆ 125 ದಿನ ಕೆಲಸ ನೀಡುವುದು ಎಂದಿದ್ದರೂ , ನಿರ್ದಿಷ್ಟವಾಗಿ ಆಗುವಂತಿಲ್ಲ. ಇದಕ್ಕೆ ಹಣವೆಲ್ಲಿದೆ. ಶೇ.40% ರಷ್ಟು ಅನುದಾನವನ್ನು ರಾಜ್ಯ ಸರ್ಕಾರ ಭರಿಸಬೇಕಿದೆ. ಭಾರಿ ಪ್ರಮಾಣದ ಆರ್ಥಿಕ ಹೊರೆ ಬೀಳುವಂತಿದ್ದರೆ ಸಂಬಂಧಪಟ್ಟ ರಾಜ್ಯಗಳೊಂದಿಗೆ ಚರ್ಚೆ ಮಾಡಬೇಕು. ಆದರೆ ಹಾಗೆ ಆಗಿಲ್ಲ. 15ನೇ ಹಣಕಾಸು ಆಯೋಗದ ಶಿಫಾರಸುಗಳು ಅನುಷ್ಠಾನಕ್ಕೆ ಬಂದ ನಂತರ ಇದನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ ಎಂದರು. ಶೀಘ್ರದಲ್ಲಿ ಪಂಚಾಯತ್ ಚುನಾವಣೆ ವಿಬಿಜಿ, ರಾಮ್ ಜಿ" ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ

    ವಿಬಿಜಿ, ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ

    2 months ago2 months ago
  • Home
  • HOME

HOME

https://www.youtube.com/embed/tvFNB-rJu0cHOME

Newsmatic - News WordPress Theme 2026. Powered By BlazeThemes.

Powered by
...
►
Necessary cookies enable essential site features like secure log-ins and consent preference adjustments. They do not store personal data.
None
►
Functional cookies support features like content sharing on social media, collecting feedback, and enabling third-party tools.
None
►
Analytical cookies track visitor interactions, providing insights on metrics like visitor count, bounce rate, and traffic sources.
None
►
Advertisement cookies deliver personalized ads based on your previous visits and analyze the effectiveness of ad campaigns.
None
►
Unclassified cookies are cookies that we are in the process of classifying, together with the providers of individual cookies.
None
Powered by